Skip to main content

ಯಾಂತ್ರಿಕ ಬದುಕು

ಯಾಂತ್ರಿಕ ಬದುಕು

ಯಾಂತ್ರಿಕ ಬದುಕಿನಲಿ
ಜೀವರಹಿತ ಸಂಬಂಧಗಳು
ಮನಸುಗಳು ಬಿಕಾರಿ ಆಗಿ
ನರಳುತಿದೆ ಜೀವನವು

ಹಣಕೆ ಸಿಗುತ್ತಿದೆ ಮಾನ್ಯತೆ
ಗುಣಕೆ ಸಿಗದ ಯೋಗ್ಯತೆ
ಹಣವಿದ್ದರೆ ಜೀವನ
ಬದುಕು ಆಗುತ್ತಿದೆ ಹೂಬನ

ಕೊಡುವರು ಹಣಕೆ ಬೆಲೆ
ಕಾಣಲಾರದು ಸಂಬಂಧಗಳ ಬೆಲೆ
ಜೀವನವಾಗಿದೆ ಯಾಂತ್ರಿಕ
ಬರಬೇಕಿದೆ   ಶಕ್ತಿ ಮಾಂತ್ರಿಕ

ಜೀವರಹಿತ ಸಂಬಂಧಗಳಿಗೆ ಬಣ್ಣ
ಬಾಳಲ್ಲಿಅರಳುವುದು ಹೂವು ಹಣ್ಣು
ಮನಸು ಮನಸುಗಳು ಒಂದಾಗಿ
ಬಾಳಬೇಕು ಬುವಿಯಲ್ಲಿ ಜತೆಯಾಗಿ

ಯಾಂತ್ರೀಕೃತ ಬದುಕು ನರಕ
ಜೀವಸೆಳೆ ತುಂಬಿರುವ ಬದುಕು ಸ್ವರ್ಗ
ಸಂಬಂಧಗಳೆಂಬ ಬಲ್ಲೆ
ಉಳಿಸಿಕೊಂಡರೆ ಕಬ್ಬಿನ ಜಲ್ಲೆ

ಪಂಕಜಾ. ಕೆ.

Comments

Popular posts from this blog

ಚಂದಿರ ಕವನ

ಚಂದಿರ ಕಾರಿರುಳ  ರಾತ್ರಿಯಲಿ ಮೋಡದ ಮರೆಯಿಂದ ಇಣುಕುತ ಬರುತಿಹನು ಬೆಳ್ಳಿಯತಟ್ಟೆಯ ತರದಲಿ ತೇಲುತ ತಾರೆಗಳನೊಡನಾಡುತ ಬರುತಿಹನು ರಸಿಕರ ಎದೆಯಲಿ ಕನಸನು ತುಂಬುತ ಮೈಮನಕೆಲ್ಲಾ ತಂಪನು ತರುತಿಹನು ಒಲ...

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...

ಶಿಶು ಪ್ರಾಸ ಗೀತೆ

ಶಿಶು ಪ್ರಾಸ ಗೀತೆ  ಕಾವ್ಯಕೂಟ ಸ್ಪರ್ಧೆಗಾಗಿ   1  ಚುಕು ಚುಕು ಎನ್ನುವ ರೈಲು ಪುಟ್ಟನ ಕೈಯಲಿ ಕೋಲು ತಂಗಿಯೂ ಬಂದಳು ಜತೆಗೆ ಆಟವ ಆಡಲು ಹೊರಗೆ   2..ತುಂಟನು ನಮ್ಮ ಪುಟ್ಟ ತಂಟೆಯ ಮಾಡುತ ಬಿದ್ದ ಅಮ್ಮನು ಕೊಟ್ಟಳು ಪೆಟ್ಟು ಕೂಗುತ ಓಡಿದ  ಎದ್ದು ಬಿದ್ದು ಪಂಕಜಾ.ಕೆ.ಮುಡಿಪು 18.6 2020