Skip to main content

ಪ್ರಕೃತಿ ಸೊಬಗು ಅಂತರರಾಜ್ಯ ಘಟಕ ದಲ್ಲಿ ಮೆಚ್ಚುಗೆ

ಗುರುಕುಲಾ ಕಲಾ ಪ್ರತಿಷ್ಠಾನ
ಅಂತರರಾಜ್ಯ ಘಟಕ
ವಾರಕ್ಕೊಬದು ಸ್ಪರ್ಧೆ 20.09.2020
ಸ್ವರಚಿತ ಕವನ ಸ್ಪರ್ಧೆಯಲ್ಲಿ ಮೆಚ್ಚುಗೆ ಪಡೆದ ಕವನ
ವಿಷಯ..ಪ್ರಕೃತಿ

   ಶೀರ್ಷಿಕೆ.. ಪ್ರಕೃತಿ ಸೊಬಗು 
  
ಬಾನ ಬಯಲಲಿ ಮುಗಿಲು ಕಾಣುತ
ಮನದಿ ತುಂಬಿತು ಮೋದವು
ಸುರಿದ ಮಳೆಯಲಿ ಕರಗಿ ಹೋಯಿತು
ಇಳೆಯ ಮೇಲಿನ ಕೊಳೆಗಳು

ಮುಗಿಲಿನೆತ್ತರ ಹಾರುತಿರುವ
ಹಕ್ಕಿಗಳ ಕಲರವದಲಿ
ಮನವು ನಲಿಯಿತು ನವಿಲಿನಂದದಿ
ಕನಸು ಮನಸಲಿ ತುಂಬುತಾ

ಏನಿದೇನಿದು ಪ್ರಕೃತಿ ವೈಭವ
ಕಣ್ಣು ಮನವನು ತುಂಬಿದೆ
ಹಸಿರ ಸಿರಿಯಲಿ ಮೈ ಮರೆಯುತ
ನಲಿಯು ಎದೆಯಲಿ ತುಂಬಿದೆ

ಹಚ್ಚ ಹಸಿರಿನ ಸೆರಗು ಹಾಸಿದೆ
ಪ್ರಕೃತಿ ಮುದದಲಿ ನಲಿಯುತ
ಚಿಗುರು ಹೂಗಳು ತುಂಬಿ ತುಳುಕುತ
ಕಣ್ಣು ಮನವನು ಸೆಳೆಯಿತು

ಪಂಕಜಾ.ಕೆ. ಮುಡಿಪು
ನಿವೃತ್ತ ಅಸ್ಸಿಸ್ಟಂಟ್ ಪೋಸ್ಟ್ ಮಾಸ್ಟರ್
.ಶ್ರೀ ಗಣೇಶ ಕೃಪಾ.ಮುಡಿಪು.
ಅಂಚೆ.ಕುರ್ನಾಡು.ದ.ಕ.574153

Comments

Popular posts from this blog

ಚಂದಿರ ಕವನ

ಚಂದಿರ ಕಾರಿರುಳ  ರಾತ್ರಿಯಲಿ ಮೋಡದ ಮರೆಯಿಂದ ಇಣುಕುತ ಬರುತಿಹನು ಬೆಳ್ಳಿಯತಟ್ಟೆಯ ತರದಲಿ ತೇಲುತ ತಾರೆಗಳನೊಡನಾಡುತ ಬರುತಿಹನು ರಸಿಕರ ಎದೆಯಲಿ ಕನಸನು ತುಂಬುತ ಮೈಮನಕೆಲ್ಲಾ ತಂಪನು ತರುತಿಹನು ಒಲ...

ಶಿಶು ಪ್ರಾಸ ಗೀತೆ

ಶಿಶು ಪ್ರಾಸ ಗೀತೆ  ಕಾವ್ಯಕೂಟ ಸ್ಪರ್ಧೆಗಾಗಿ   1  ಚುಕು ಚುಕು ಎನ್ನುವ ರೈಲು ಪುಟ್ಟನ ಕೈಯಲಿ ಕೋಲು ತಂಗಿಯೂ ಬಂದಳು ಜತೆಗೆ ಆಟವ ಆಡಲು ಹೊರಗೆ   2..ತುಂಟನು ನಮ್ಮ ಪುಟ್ಟ ತಂಟೆಯ ಮಾಡುತ ಬಿದ್ದ ಅಮ್ಮನು ಕೊಟ್ಟಳು ಪೆಟ್ಟು ಕೂಗುತ ಓಡಿದ  ಎದ್ದು ಬಿದ್ದು ಪಂಕಜಾ.ಕೆ.ಮುಡಿಪು 18.6 2020

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...