Skip to main content

ಚಿತ್ರಕ್ಕೊಂದ ಕಥೆ ಕಲಾಕಾರ

 ಕವಿ ಸಾಹಿತಿಗಳ ಜೀವಾಳ ಚಿತ್ರ ಕಥಾ ಸ್ಪರ್ಧೆಗಾಗಿ
 
ಕಲಾಕಾರ

ಶಿವಪ್ಪ ಒಬ್ಬ ಅದ್ಬುತ ಶಿಲ್ಪಿ.ಕಲ್ಲಿನಿಂದ ವಿವಿಧ ಶಿಲ್ಪಕಲೆಗಳನ್ನು ಮಾಡುವುದರಲ್ಲಿ ಸಿದ್ದಹಸ್ತರೆಂದು ಹೆಸರುವಾಸಿಯಾಗಿದ್ದರು. ಕಲ್ಲಿನಲ್ಲಿ ಅನೇಕ ದೇವರ ಮೂರ್ತಿ ಗಳನ್ನು ಆತ  ಕೆತ್ತಿದ್ದ . ಭಾರತದ ಹೆಚ್ಚಿನ ದೇವಸ್ಥಾನಗಳ ಶಿಲ್ಪಗಳು ಆತನ ಕೈ ಚಳಕದಿಂದ ನಿರ್ಮಾಣವಾಗಿದ್ದುದಾಗಿತ್ತು. ಬಾಲ್ಯದಿಂದಲೂ  ಬಿಡದೆ ಮಾಡಿದ ಕಾಯಕವಾಗಿದ್ದರೂ .ಪ್ರಾಯಸಂದ ಆತನಿಗೆ ಇಂದು ಅದು ಅನಿವಾರ್ಯವಾಗಿತ್ತು .
        .        ತನ್ನ ಒಬ್ಬನೇ ಮಗ ಹಾಗೂ ಸೊಸೆಯನ್ನು ಒಂದೇ ದಿನದಲ್ಲಿ ಕಳೆದುಕೊಂಡ ಶಿವಪ್ಪನಿಗೆ  ಮೊಮ್ಮಗಳು ಶ್ರುತಿಯೇ ಈಗ  ಬಾಳಿನ ಬೆಳಕು .ಅವಳನ್ನು ದೂರದ ಹಾಸ್ಟೆಲ್ ನಲ್ಲಿ ಬಿಟ್ಟು ವಿದ್ಯೆಕಲಿಸುತ್ತಿದ್ದ  ಶಿವಪ್ಪನಿಗೆ ತನ್ನ ನಂತರ ತನ್ನ ಕುಲಕಸುಬನ್ನು ಮುಂದುವರಿಸಲು ಯಾರೂ ಇಲ್ಲವೆನ್ನುವ ಚಿಂತೆಯಿದ್ದರೂ  ಮೊಮ್ಮಗಳ ನಗುಮುಖವನ್ನು ನೋಡಿ ತನ್ನ ದುಃಖವನ್ನು ಮರೆಯುತ್ತಿದ್ದ.
        ಆ ದಿನ ಮೊಮ್ಮಗಳು ಓದು ಮುಗಿಸಿ ಅಜ್ಜನ ಮನೆಗೆ ಬಂದಿದ್ದಳು.ಅಜ್ಜನ ಕೆಲಸವನ್ನು ನೋಡುತ್ತಾ ಅಜ್ಜನಿಗೆ ತನ್ನ ಕಾಲೇಜಿನ ಅನುಭವಗಳನ್ನು  ರಸವತ್ತಾಗಿ ಹೇಳುತ್ತಾ ನಗುತ್ತಿದ್ದ ಅವಳನ್ನು ಕಂಡು ಶಿವಪ್ಪ ತನ್ನ ಕಾಯಕವನ್ನು ಅತ್ಯಂತ ಶ್ರದ್ಧೆಯಿಂದ ಮಾಡುತ್ತಿದ್ದ
ಮೊಮ್ಮಗಳಿಗೆ ಆದಷ್ಟು ಬೇಗ ಒಂದು ದಾರಿ ಮಾಡಬೇಕು ಅನ್ನುವ ಚಿಂತೆ ಅವನದಾದರೆ ಮೊಮ್ಮಗಳು ರಶ್ಮಿಗೆ ತಾನು ಆದಷ್ಟು ಬೇಗ ಕೆಲಸಕ್ಕೆ ಸೇರಿ ಅಜ್ಜನನ್ನು ದುಡಿಮೆಯಿಂದ  ಬಿಡಿಸಿ ವೃದ್ಧಾಪ್ಯವನ್ನು  ಆತನು ಆರಾಮವಾಗಿ  ಕಳೆಯುವಂತೆ ಮಾಡಬೇಕು  ತಾನು ಅವನನ್ನು ಪ್ರೀತಿಯಿಂದ ಕಾಣಬೇಕು ಎನ್ನುವ ಯೋಚನೆಯಾಗಿತ್ತು .

ಪಂಕಜಾ.ಕೆ.ಮುಡಿಪು

Comments

Popular posts from this blog

ನವಪರ್ವಕ್ಕೆ ಕಳಿಸಿದ ಪದ್ಯ

[13/01, 10:13 PM] pankajarambhat: ಕಾಗೆ ಬೆಳಗಿನ ಜಾವವೇ  ಬೇಗನೆ ಏಳುತ ಪರಿಸರ ಶುಚಿಯನು ಮಾಡುವುದು ಕಾಳನು ಕಂಡರೆ ಕಾ ಕಾ ಎನುತ ತನ್ನಯ ಬಳಗವ ಕರೆಯುವುದು ಮರದಲ್ಲಿ ಕುಳಿತು ಕತ್ತನು ಕೊಂಕಿಸಿ ಕಸವನು ಸೇರಿಸಿ ಸುಂದರ ಮನೆಯನು ಕಟ್ಟುವುದು ತನ್ನಯ ಮನೆಯಲಿ  ಕೋಗಿಲೆ ಮರಿಗೂ ಕಾವನು ಕೊಡುತ ಬೆಳೆಸುವುದು ಕಪ್ಪನೆ ಇದ್ದರೂ ಚೊಕ್ಕಟ ವಿರುವ ಗುಣವನು ತಾನು ಕಲಿತಿಹುದು ಏನೇ ಕಂಡರೂ ಬಳಗವ ಕರೆಯುತ ಹಂಚಿಯೇ ಅದನು ತಿನ್ನುವುದು  ಕಾಗೆಯ ಕಂಡರೆ  ಅನಿಷ್ಟವೆನುತ ದೂರಕೆ ಓಡಿಸುತ್ತಿರುವರು ಶ್ರಾದ್ಧದ ದಿನದಲಿ ಕಾಗೆಯ ಕರೆಯುತ ಕಾ ಕಾ ಎನುತ ಕಾಯುವರು ಸ್ವಾರ್ಥ ಬುದ್ಧಿಯ ಮನುಜ ಕಲಿವನೆ ನಿನ್ನಯ ಒಳ್ಳೆಯ ಗುಣಗಳನು ಹಕ್ಕಿಗಳಲ್ಲಿ ನೀನೆ ಗುಣದಲಿ ಶ್ರೇಷ್ಠವಾಗಿರುವೆಯಲ್ಲ ಕೊಡದಿಹರೇಕೆ  ಮನ್ನಣೆ ಯನ್ನು ಜಗದ ಜನರು ನಿನಗೆ ಪಂಕಜಾ.ಕೆ [13/01, 10:17 PM] pankajarambhat: ನನ್ನ ಪರಿಚಯ ಗಜಲ್ ನಾನಾಗಿದ್ದೆ ಅಂಚೆ ಇಲಾಖೆಯ  ದಕ್ಷ ಕೆಲಸಗಾತಿ  ಸ್ವಯಂ  ನಿವೃತ್ತಿಯ  ನಂತರ ಸಂಪೂರ್ಣ  ಮನೆಯೊಡತಿ  ನನ್ನ ಮೊದಲ ಕವನ ಸಂಕಲನ ಸಾವಿತ್ರಿ ಬಿಡುಗಡೆಯ ಮಾಡಿ ನಾನಾದೆ ಕವನಗಳೊಡತಿ  ಹೊಲಿಗೆ  ಕಸೂತಿ ಕೈತೋಟ ಮನೆವಾರ್ತೆ ನನ್ನ ಹಾಬಿ ಮನದಲ್ಲಿ ಬರೆವ ತುಡಿತವಿರಲು ನಾ ಇಂದು ಬರಹಗಾತಿ ದಕ್ಷಿಣ ಕನ್ನಡದ  ಮುಡಿಪು ಮೆಚ್ಚಿನ  ನನ್ನೂರು ಕೊಡಕ್ಕಲ್ಲು ವೆಂಕಟ್ರಮಣ ಭಟ್ ಸಾವಿತ್ರಿ ದಂ...

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...

*ಆರೋಗ್ಯದ ಗುಟ್ಟು*ಒಂದು ಹನಿ ಪೋಲಿಯೋ ಬಿಂದು ಮಕ್ಕಳ ಪಾಲಿನ ಅಮೃತದ ಸಿಂಧು ಹಾಕಿರಿ ಮಕ್ಕಳಿಗೆ ಪೋಲಿಯೋ ಲಸಿಕೆಬಾರದಂತೆ ಅಂಗವಿಕಲತೆಯ ಕುಣಿಕೆಆರೋಗ್ಯವಂತರಾಗಿರಲು ನಾವುತಿನ್ನಬೇಕು ಆಹಾರದ ಜತೆ ಬೇವುಕಾಲಕ್ಕೆ ಸರಿಯಾಗಿ ಊಟ ತಿಂಡಿ ಮಾಡಿಸಾಕಷ್ಟು ನೀರು ಕುಡಿಯುವುದು ನೋಡಿಸಮತೋಲನ ಆಹಾರ ಸೇವಿಸಬೇಕುಕಾಲಕಾಲಕ್ಕೆ ಊಟ ತಿಂಡಿ ಮಾಡಬೇಕುಹಣ್ಣು ಹಂಪಲುಗಳು ನಿಮ್ಮ ಆಹಾರದಲ್ಲಿರಲಿಆರೋಗ್ಯಕ್ಕಾಗಿ ಯೋಗ ನಡಿಗೆಯ ಅಭ್ಯಾಸವಿರಲಿಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಸೇವಿಸಿ ಕುರುಕಲು ತಿಂಡಿಗಳ ಸೇವನೆಯನ್ನು ನಿವಾರಿಸಿಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಿ ನಿತ್ಯವೂ ಧ್ಯಾನ ಮಾಡುವುದನ್ನು ರೂಢಿಸಿಕೊಳ್ಳಿಕನಿಷ್ಠ ಆರು ಗಂಟೆಗಳ ನಿದ್ದೆ ಅವಶ್ಯಕದೇಹ ಮನಸಿಗೆ ಆರಾಮದಾಯಕಹಸಿವೆ ಆದಾಗ ಮಾತ್ರ ಆಹಾರ ಸೇವಿಸಿಮಾದಕ ವಸ್ತುಗಳ ಸೇವನೆ ನಿಲ್ಲಿಸಿ*ಪಂಕಜಾ.ಕೆ.ರಾಮ ಭಟ್**ಮುಡಿಪು.ಕುರ್ನಾಡು*