Skip to main content

ಅತ್ಯುತ್ತಮವೆಂದು ಆಯ್ಕೆ ಗುರುಕುಲ ಶಿವಮೊಗ್ಗ ಘಟಕ ಜೋಗ ಜಲಪಾತ

ಗುರುಕುಲ ಶಿವಮೊಗ್ಗ ಘಟಕದ ಬಾನುವಾರದ ಸ್ಪರ್ಧೆಗಾಗಿ

 ಚಿತ್ರಕ್ಕೊಂದು  ಕವನ

ಜೋಗ ಜಲಪಾತ

ಮನಸೂರೆಗೊಳ್ಳುತ್ತಿದೆ ನಿನ್ನ ಲಾಸ್ಯ
ರುದ್ರರಮಣೀಯ ಸೌಂದರ್ಯ ಬಾಷ್ಯ

ಪ್ರವಾಸಿಗರ ಮನತಣಿಸುತಿದೆ  ವೈಭೋಗ
ನೋಡಲು ಎರಡು ಕಣ್ಣು ಸಾಲದಾಗಿದೆ ಈಗ

ರಾಜ  ನಡಿಗೆಯಲಿ  ಸರಿದು ಬಂದು
ಬಳುಕುವ ಬಳ್ಳಿಯಂತೆ ಹರಿಯುತ ನಿಂದು

ಧುಮ್ಮಿಕ್ಕಿ ಆರ್ಭಟಿಸುತಿದೆ ಕಣ್ಣು ಸೆಳೆದು
ರಸಿಕರ ಮನದಲಿ ಬೆರಗನು ತಂದು

ಬಾಣದಂತೆ ಚಿಮ್ಮಿ ನೊರೆಯುಕ್ಕಿಸುವ ಪರಿ
ಹಿಡಿದಿಡಲಾಗದು ನಿನ್ನ ಈ ಸೊಬಗಿನ ವೈಖರಿ

ಜಲಧಾರೆಯ ಸೌಂದರ್ಯ ಕ್ಕೆ ಎಣೆಯುಂಟೆ
ಜೋಗ ಜಲಪಾತದ ಸೊಬಗ ಕಾಣದವರುಂಟೆ

ಮಳೆಗಾಲದಲ್ಲಿ ಅಬ್ಬರಿಸಿ ಹರಿಯುವುದು
ಹೃದಯ ನಡುಗಿಸುವ ಶಬ್ದ ಮಾಡುವುದು

ಕಡಿದಾದ ಕಣಿವೆಯ ಪರಿಸರದ ಸುಂದರ ದೃಶ್ಯ
ಬೇರೆಯೇ ಲೋಕಕ್ಕೆ ಕರೆದೊಯ್ಯುವುದು ಸತ್ಯ

ಕನ್ನಡ ನಾಡಿನ ಹೆಮ್ಮೆಯ ಈ  ತಾಣ
ವಿಶ್ವವಿಖ್ಯಾತ ಸುಂದರ ಸ್ಥಳ ಕಾಣ

ಮಲೆನಾಡಿನ ಸೌಂದರ್ಯಕ್ಕೆ ಮುಕುಟಮಣಿ
ಜೋಗ ಜಲಪಾತವೆಂಬ  ಈ ನಮ್ಮ ಕಣ್ಮಣಿ

ಪಶ್ಚಿಮಘಟ್ಟದ ರುದ್ರ ರಮಣೀಯ ನೋಟ
ರಸಿಕರಿಗೆ ಪ್ರಕೃತಿ ಸಿರಿಯ  ವೈಭವದ ಊಟ

ರಾಜಗಾಂಭೀರ್ಯದಲಿ ಹರಿಯುವ ರೀತಿ
ನೋಡುತಲಿದ್ದರೆ  ತಲೆದೋರುವುದು ಭೀತಿ

ಬಳ್ಳಿಯಂತೆ ಬಳುಕುತ್ತಾ ಹರಿದಾಡುವ ಚೆಲುವು
ನವಿಲಿನ ನಾಟ್ಯದ ತೆರದಂತೆ  ಮೈಮನಕೆ ನಲಿವು

ರಾಕೆಟ್ನಂತೆ ಧುಮುಕುವ ನೀರಧಾರೆಯಸೊಬಗು
ಮನಮೋಹಕ ದೃಶ್ಯ ಕಾಣುವ ಕಣ್ಣಿಗೆ ಬೆರಗು

ಪಂಕಜಾ.ಕೆ. ಮುಡಿಪು
ನಿವೃತ್ತ ಅಸ್ಸಿಸ್ಟಂಟ್ ಪೋಸ್ಟ್ ಮಾಸ್ಟರ್
ಶ್ರೀ ಗಣೇಶ ಕೃಪಾ . ಮುಡಿಪು.ಅಂಚೆ.ಕುರ್ನಾಡು.ದ.ಕ. 574153
ಮೊಬೈಲ್ ನಂಬರ್ 9964659620

Comments

Popular posts from this blog

ನವಪರ್ವಕ್ಕೆ ಕಳಿಸಿದ ಪದ್ಯ

[13/01, 10:13 PM] pankajarambhat: ಕಾಗೆ ಬೆಳಗಿನ ಜಾವವೇ  ಬೇಗನೆ ಏಳುತ ಪರಿಸರ ಶುಚಿಯನು ಮಾಡುವುದು ಕಾಳನು ಕಂಡರೆ ಕಾ ಕಾ ಎನುತ ತನ್ನಯ ಬಳಗವ ಕರೆಯುವುದು ಮರದಲ್ಲಿ ಕುಳಿತು ಕತ್ತನು ಕೊಂಕಿಸಿ ಕಸವನು ಸೇರಿಸಿ ಸುಂದರ ಮನೆಯನು ಕಟ್ಟುವುದು ತನ್ನಯ ಮನೆಯಲಿ  ಕೋಗಿಲೆ ಮರಿಗೂ ಕಾವನು ಕೊಡುತ ಬೆಳೆಸುವುದು ಕಪ್ಪನೆ ಇದ್ದರೂ ಚೊಕ್ಕಟ ವಿರುವ ಗುಣವನು ತಾನು ಕಲಿತಿಹುದು ಏನೇ ಕಂಡರೂ ಬಳಗವ ಕರೆಯುತ ಹಂಚಿಯೇ ಅದನು ತಿನ್ನುವುದು  ಕಾಗೆಯ ಕಂಡರೆ  ಅನಿಷ್ಟವೆನುತ ದೂರಕೆ ಓಡಿಸುತ್ತಿರುವರು ಶ್ರಾದ್ಧದ ದಿನದಲಿ ಕಾಗೆಯ ಕರೆಯುತ ಕಾ ಕಾ ಎನುತ ಕಾಯುವರು ಸ್ವಾರ್ಥ ಬುದ್ಧಿಯ ಮನುಜ ಕಲಿವನೆ ನಿನ್ನಯ ಒಳ್ಳೆಯ ಗುಣಗಳನು ಹಕ್ಕಿಗಳಲ್ಲಿ ನೀನೆ ಗುಣದಲಿ ಶ್ರೇಷ್ಠವಾಗಿರುವೆಯಲ್ಲ ಕೊಡದಿಹರೇಕೆ  ಮನ್ನಣೆ ಯನ್ನು ಜಗದ ಜನರು ನಿನಗೆ ಪಂಕಜಾ.ಕೆ [13/01, 10:17 PM] pankajarambhat: ನನ್ನ ಪರಿಚಯ ಗಜಲ್ ನಾನಾಗಿದ್ದೆ ಅಂಚೆ ಇಲಾಖೆಯ  ದಕ್ಷ ಕೆಲಸಗಾತಿ  ಸ್ವಯಂ  ನಿವೃತ್ತಿಯ  ನಂತರ ಸಂಪೂರ್ಣ  ಮನೆಯೊಡತಿ  ನನ್ನ ಮೊದಲ ಕವನ ಸಂಕಲನ ಸಾವಿತ್ರಿ ಬಿಡುಗಡೆಯ ಮಾಡಿ ನಾನಾದೆ ಕವನಗಳೊಡತಿ  ಹೊಲಿಗೆ  ಕಸೂತಿ ಕೈತೋಟ ಮನೆವಾರ್ತೆ ನನ್ನ ಹಾಬಿ ಮನದಲ್ಲಿ ಬರೆವ ತುಡಿತವಿರಲು ನಾ ಇಂದು ಬರಹಗಾತಿ ದಕ್ಷಿಣ ಕನ್ನಡದ  ಮುಡಿಪು ಮೆಚ್ಚಿನ  ನನ್ನೂರು ಕೊಡಕ್ಕಲ್ಲು ವೆಂಕಟ್ರಮಣ ಭಟ್ ಸಾವಿತ್ರಿ ದಂ...

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...

ಗಜಲ್ ಬಗ್ಗೆ

[06/06, 9:41 AM] pankajarambhat: ಗಜಲ್ ಪಾಠ ಗಜಲ್ ಕಲಿಯಲು ಆಸಕ್ತಿ ಇದ್ದವರಿಗಾಗಿ ಒಂದು ಪ್ರಯತ್ನ ಗಜಲ್ ಮುಖ್ಯವಾಗಿ ಇರಬೇಕಾದ ಅಂಶಗಳು *ದ್ವೀಪದಿ* *ಮತ್ಲಾ* *ರದೀಫ್* *ಕಾಫಿಯ* *ಷೇರುಗಳು* *ಮಖ್ತ* ಇಷ್ಟು ವಿಷಯಗಳು ನೆನಪಿರಬೇಕಾದ ಅಂಶಗಳು *ದ್ವೀಪದಿ*- ಗಜಲ್ ಮುಖ್ಯವಾಗಿ ದ್ವೀಪದಿ ಗಳಲ್ಲಿ ಇರಬೇಕು.ಎರಡೆರಡು ಸಾಲುಗಳಲ್ಲಿ *ಮತ್ಲಾ*- ಎಂದರೆ ಗಜಲ್ ನ ಮೊದಲ ಚರಣ. ಇದು ದ್ವೀಪದಿಯಲ್ಲಿದ್ದು ಇದರ ಎರಡು ಚರಣದ ಕೊನೆಯಲ್ಲಿ ಒಂದೇ ರೀತಿಯ ಪ್ರಾಸಗಳು ಬರಬೇಕು ಕಾಫಿಯ ದ ಕೊನೆಯ ಮತ್ತು ರದೀಫ್ ಪ್ರಾಸವಾಗಿದ್ದು ಮುಂದಿನ ಎಲ್ಲಾ ಷೇರುಗಳಲ್ಲಿ ಇದು ಕಡ್ಡಾಯವಾಗಿ ಬರಬೇಕು *ರದೀಫ್*- ಇದು ಒಂದು ಪ್ರಾಸ . ಕಾಫಿಯ ದ ನಂತರ ಎಲ್ಲಾ ಷೇರು ಗಳಲ್ಲಿ  ಮತ್ತೆ ಮತ್ತೆ ಬರುವ ಪದ. ಇವು ಅರ್ಥವುಳ್ಳದಾಗಿದ್ದು ಗಜಲ್ ಗೆ ಮೆರಗು ನೀಡಲು ಸಹಕಾರಿ ರದೀಪ್ ಇಲ್ಲದೆ ಗಜಲ್ ಬರೆಯಬಹುದು ಆದರೆ ಹೆಚ್ಚ ಚಾಲ್ತಿ ಇರೋದು ರದೀಪ್ ಇರುವ ಗಜಲ್ *ಕಾಫಿಯ*- ಇದು ರದೀಪ್ ನ ಹಿಂದೆ ಬರುವ ಪದದ ಕೊನೆಯ ಅಕ್ಷರ. ಇಲ್ಲಿ ಇದಕ್ಕೆ ರವಿ ಎನ್ನುತ್ತಾರೆ ಇದು ಪ್ರಾಸವಾಗಿರುತ್ತದೆ ಆದರೆ ಕೊನೆಯ ಅಕ್ಷರ ಮಾತ್ರ ಒಂದೇ ಆಗಿರಬೇಕು ಕಾಫಿಯಾ ಯಾವಾಗಲು ಒಂದೇ ಆಗಿರಬಾರದು. ಉದಾ: ಬದುಕಿಸಿ, ಸಾಯಿಸಿ,ಬಯಸಿ ಹೀಗೆ ಇಲ್ಲಿ *ಸಿ*  ರವಿ ಆಗಿರುತ್ತದೆ ರವಿ ಇರುವ ಪದ ಕಾಫಿಯ ಆಗುತ್ತದೆ ಅವು ಬೇರೆ ಬೇರೆ ಆಗಿರಬೇಕು *ಷೇರುಗಳು*- ಎಂದರೆ ದ್ವಿಪದಿಯಲ್ಲಿರುವ ಚರಣಗಳು *ಮಖ್ತ*- ಇದು ಕೊನೆಯ ದ್ವಿಪ...