Skip to main content

ಸಾಹಿತ್ಯ ಮತ್ತು ಬದುಕು ಲೇಖನ ಗುರುಕುಲ ಉಡುಪಿ ಘಟಕ ದಲ್ಲಿ ಅತ್ಯುತ್ತಮ

ಗುರುಕುಲ ಉಡುಪಿ ಜಿಲ್ಲಾ ಘಟಕ ಸ್ಪರ್ಧೆಗಾಗಿ

ವಿಷಯ ..ಸಾಹಿತ್ಯ ಮತ್ತು ಬದುಕು

ಸಾಹಿತ್ಯ ಮತ್ತು ಬದುಕು ಒಂದಕ್ಕೊಂದು ಪೂರಕವಾಗಿದೆ. ಸಾಹಿತ್ಯ ಬದುಕಿನ ಅವಿಭಾಜ್ಯ ಅಂಗವೆಂದರೆ ತಪ್ಪಲ್ಲ. ಬದುಕು ಮತ್ತು ಬರಹ ಒಂದೇ ಆಗಿದ್ದರೆ ಮಾತ್ರ ಆ ಸಾಹಿತ್ಯ ಸತ್ವಯುತವಾಗಿರುತ್ತದೆ. ಹೇಳುವುದೇ ಒಂದು ಮಾಡುವುದೇ ಒಂದು ಎಂದಾಗಿದ್ದಾಗ ಅಂತಹ ಸಾಹಿತ್ಯ ಜನಮನವನ್ನು ಸೆಳೆಯದು. ಬದುಕು ಮತ್ತು ಸಾಹಿತ್ಯ ಒಂದೇ ತೆರನಾಗಿ ಇರುವ ಸಾಹಿತಿಯ ಬರಹಕ್ಕೆ ಅದರದೇ ಆದ  ಸತ್ವವಿರುತ್ತದೆ. ನಮ್ಮ ಜೀವನದಲ್ಲಿ ಕಂಡಂತಹ ಅನುಭವ ನೋವು ನಿರಾಶೆ ಸುಖ ದುಃಖ ಗಳು ಸಾಹಿತ್ಯವಾಗಿ  ಹೊರ ಹೊಮ್ಮಿ ನಮ್ಮನ್ನು ನೋಯಿಸಿದವರಿಗೆ ಅದು ತಟ್ಟುವಂತಿರಬೇಕು..
                  ಮಾನವೀಯ ಮೌಲ್ಯಗಳನ್ನು ಸಾಹಿತ್ಯದಲ್ಲಿ ಸೇರಿಸುವುದರಿಂದ  ಸಾಹಿತ್ಯವು ಸತ್ವಭರಿತವಾಗಿ ಮೌಲ್ಯಯುತ ಬರಹವಾಗುತ್ತದೆ. ಸಾಹಿತ್ಯವು ಸಮಾಜಕ್ಕೆ ಕನ್ನಡಿ ಇದ್ದಂತೆ. ಸಮಾಜದ ವ್ಯಕ್ತಿಗಳ ನಡೆ ನುಡಿ  ಇತ್ಯಾದಿಗಳನ್ನು ತಿದ್ದುವ ಕೆಲಸ ಉತ್ತಮ ಸಾಹಿತ್ಯದಿಂದ ಸಾಧ್ಯ . ಸಾಹಿತ್ಯದಲ್ಲಿ ಇರುವುದು ಮನುಷ್ಯನ ಜೀವನದ ಕಥೆ. ಓದುವ ಬರೆಯುವ ಮೂಲಕ ಬದುಕು ರೂಪಿಸಿಕೊಳ್ಳಬಹುದು. ಸಾಹಿತ್ಯ ಬದುಕಿನ ಬಾಗವಾಗಿದ್ದಂತೆ ಬದುಕೂ ಸಾಹಿತ್ಯದ ಒಂದು ಬಾಗವೇ ಆಗಿದೆ.  ವರಕವಿ ಕುಬೆಂಪು, ರಾಮಕೃಷ್ಣ ಪರಮಹಂಸ, ವಿವೇಕಾನಂದ ಇವರೆಲ್ಲರ  ಸಾಹಿತ್ಯವು  ಬದುಕಿಗೆ ಹತ್ತಿರವಾಗಿದೆ  ದಾಸರ ಪದಗಳು ,ಶರಣರ ವಚನಗಳು,  ತ್ರಿಪದಿಗಳು, ಮಂಕು ತಿಮ್ಮನ ಕಗ್ಗ ಇವೆಲ್ಲವೂ ಬದುಕಿಗೆ ಜನಮಾನಸಕ್ಕೆ ಹಿಡಿದ ಕನ್ನಡಿಯಾಗಿದೆ   ಜನಪದ ಸಾಹಿತ್ಯವಂತೂ  ಬದುಕಿನ ನೋವು ನಲಿವುಗಳನ್ನು  ಅಂದಂದಿನ ಘಟನೆಗಳನ್ನು ಹಾಡಿ ಕಟ್ಟಿದ ಅದ್ಬುತ ಸಾಹಿತ್ಯವಾಗಿದ್ದು ,ನಮ್ಮ ಸಂಸ್ಕೃತಿಯನ್ನು  ಬಿಂಬಿಸುತ್ತದೆ  ಇದರಷ್ಟು ಶ್ರೀಮಂತ  ಸಾಹಿತ್ಯ ಬೇರೊಂದಿಲ್ಲ.ಒಟ್ಟಿನಲ್ಲಿ ಹೇಳುವುದಾದರೆ  ಬದುಕನ್ನು ಬಿಟ್ಟು ಸಾಹಿತ್ಯವಿಲ್ಲ ಸಾಹಿತ್ಯವನ್ನು ಬಿಟ್ಟು ಬದುಕಿಲ್ಲ .ಆದ್ದರಿಂದ  ಸಾಹಿತ್ಯ ಸರಸ್ವತಿಯ ಸೇವೆಯನ್ನು ಆದಷ್ಟು ನಾವೆಲ್ಲಾ ಮಾಡಿ ಸಾಹಿತ್ಯಮತ್ತು ಬದುಕನ್ನು ಶ್ರೀಮಂತವಾಗಿಟ್ಟು ಮುಂದಿನ ಜನಾಂಗಕ್ಕೆ ಮಾದರಿಯಾಗಬೇಕು. 
                  
ಪಂಕಜಾ.ಕೆ. ಮುಡಿಪು.ನಿವೃತ್ತ  ಅಸ್ಸಿಸ್ಟಂಟ್ ಪೋಸ್ಟ್ ಮಾಸ್ಟರ್ .ಶ್ರೀ ಗಣೇಶ ಕೃಪಾ.ಮುಡಿಪು .ಕುರ್ನಾಡು.ದ.ಕ.574153 ಮೊಬೈಲ್ ನಂಬರ್ 9964659620

Comments

Popular posts from this blog

ನವಪರ್ವಕ್ಕೆ ಕಳಿಸಿದ ಪದ್ಯ

[13/01, 10:13 PM] pankajarambhat: ಕಾಗೆ ಬೆಳಗಿನ ಜಾವವೇ  ಬೇಗನೆ ಏಳುತ ಪರಿಸರ ಶುಚಿಯನು ಮಾಡುವುದು ಕಾಳನು ಕಂಡರೆ ಕಾ ಕಾ ಎನುತ ತನ್ನಯ ಬಳಗವ ಕರೆಯುವುದು ಮರದಲ್ಲಿ ಕುಳಿತು ಕತ್ತನು ಕೊಂಕಿಸಿ ಕಸವನು ಸೇರಿಸಿ ಸುಂದರ ಮನೆಯನು ಕಟ್ಟುವುದು ತನ್ನಯ ಮನೆಯಲಿ  ಕೋಗಿಲೆ ಮರಿಗೂ ಕಾವನು ಕೊಡುತ ಬೆಳೆಸುವುದು ಕಪ್ಪನೆ ಇದ್ದರೂ ಚೊಕ್ಕಟ ವಿರುವ ಗುಣವನು ತಾನು ಕಲಿತಿಹುದು ಏನೇ ಕಂಡರೂ ಬಳಗವ ಕರೆಯುತ ಹಂಚಿಯೇ ಅದನು ತಿನ್ನುವುದು  ಕಾಗೆಯ ಕಂಡರೆ  ಅನಿಷ್ಟವೆನುತ ದೂರಕೆ ಓಡಿಸುತ್ತಿರುವರು ಶ್ರಾದ್ಧದ ದಿನದಲಿ ಕಾಗೆಯ ಕರೆಯುತ ಕಾ ಕಾ ಎನುತ ಕಾಯುವರು ಸ್ವಾರ್ಥ ಬುದ್ಧಿಯ ಮನುಜ ಕಲಿವನೆ ನಿನ್ನಯ ಒಳ್ಳೆಯ ಗುಣಗಳನು ಹಕ್ಕಿಗಳಲ್ಲಿ ನೀನೆ ಗುಣದಲಿ ಶ್ರೇಷ್ಠವಾಗಿರುವೆಯಲ್ಲ ಕೊಡದಿಹರೇಕೆ  ಮನ್ನಣೆ ಯನ್ನು ಜಗದ ಜನರು ನಿನಗೆ ಪಂಕಜಾ.ಕೆ [13/01, 10:17 PM] pankajarambhat: ನನ್ನ ಪರಿಚಯ ಗಜಲ್ ನಾನಾಗಿದ್ದೆ ಅಂಚೆ ಇಲಾಖೆಯ  ದಕ್ಷ ಕೆಲಸಗಾತಿ  ಸ್ವಯಂ  ನಿವೃತ್ತಿಯ  ನಂತರ ಸಂಪೂರ್ಣ  ಮನೆಯೊಡತಿ  ನನ್ನ ಮೊದಲ ಕವನ ಸಂಕಲನ ಸಾವಿತ್ರಿ ಬಿಡುಗಡೆಯ ಮಾಡಿ ನಾನಾದೆ ಕವನಗಳೊಡತಿ  ಹೊಲಿಗೆ  ಕಸೂತಿ ಕೈತೋಟ ಮನೆವಾರ್ತೆ ನನ್ನ ಹಾಬಿ ಮನದಲ್ಲಿ ಬರೆವ ತುಡಿತವಿರಲು ನಾ ಇಂದು ಬರಹಗಾತಿ ದಕ್ಷಿಣ ಕನ್ನಡದ  ಮುಡಿಪು ಮೆಚ್ಚಿನ  ನನ್ನೂರು ಕೊಡಕ್ಕಲ್ಲು ವೆಂಕಟ್ರಮಣ ಭಟ್ ಸಾವಿತ್ರಿ ದಂ...

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...

ಗಜಲ್ ಬಗ್ಗೆ

[06/06, 9:41 AM] pankajarambhat: ಗಜಲ್ ಪಾಠ ಗಜಲ್ ಕಲಿಯಲು ಆಸಕ್ತಿ ಇದ್ದವರಿಗಾಗಿ ಒಂದು ಪ್ರಯತ್ನ ಗಜಲ್ ಮುಖ್ಯವಾಗಿ ಇರಬೇಕಾದ ಅಂಶಗಳು *ದ್ವೀಪದಿ* *ಮತ್ಲಾ* *ರದೀಫ್* *ಕಾಫಿಯ* *ಷೇರುಗಳು* *ಮಖ್ತ* ಇಷ್ಟು ವಿಷಯಗಳು ನೆನಪಿರಬೇಕಾದ ಅಂಶಗಳು *ದ್ವೀಪದಿ*- ಗಜಲ್ ಮುಖ್ಯವಾಗಿ ದ್ವೀಪದಿ ಗಳಲ್ಲಿ ಇರಬೇಕು.ಎರಡೆರಡು ಸಾಲುಗಳಲ್ಲಿ *ಮತ್ಲಾ*- ಎಂದರೆ ಗಜಲ್ ನ ಮೊದಲ ಚರಣ. ಇದು ದ್ವೀಪದಿಯಲ್ಲಿದ್ದು ಇದರ ಎರಡು ಚರಣದ ಕೊನೆಯಲ್ಲಿ ಒಂದೇ ರೀತಿಯ ಪ್ರಾಸಗಳು ಬರಬೇಕು ಕಾಫಿಯ ದ ಕೊನೆಯ ಮತ್ತು ರದೀಫ್ ಪ್ರಾಸವಾಗಿದ್ದು ಮುಂದಿನ ಎಲ್ಲಾ ಷೇರುಗಳಲ್ಲಿ ಇದು ಕಡ್ಡಾಯವಾಗಿ ಬರಬೇಕು *ರದೀಫ್*- ಇದು ಒಂದು ಪ್ರಾಸ . ಕಾಫಿಯ ದ ನಂತರ ಎಲ್ಲಾ ಷೇರು ಗಳಲ್ಲಿ  ಮತ್ತೆ ಮತ್ತೆ ಬರುವ ಪದ. ಇವು ಅರ್ಥವುಳ್ಳದಾಗಿದ್ದು ಗಜಲ್ ಗೆ ಮೆರಗು ನೀಡಲು ಸಹಕಾರಿ ರದೀಪ್ ಇಲ್ಲದೆ ಗಜಲ್ ಬರೆಯಬಹುದು ಆದರೆ ಹೆಚ್ಚ ಚಾಲ್ತಿ ಇರೋದು ರದೀಪ್ ಇರುವ ಗಜಲ್ *ಕಾಫಿಯ*- ಇದು ರದೀಪ್ ನ ಹಿಂದೆ ಬರುವ ಪದದ ಕೊನೆಯ ಅಕ್ಷರ. ಇಲ್ಲಿ ಇದಕ್ಕೆ ರವಿ ಎನ್ನುತ್ತಾರೆ ಇದು ಪ್ರಾಸವಾಗಿರುತ್ತದೆ ಆದರೆ ಕೊನೆಯ ಅಕ್ಷರ ಮಾತ್ರ ಒಂದೇ ಆಗಿರಬೇಕು ಕಾಫಿಯಾ ಯಾವಾಗಲು ಒಂದೇ ಆಗಿರಬಾರದು. ಉದಾ: ಬದುಕಿಸಿ, ಸಾಯಿಸಿ,ಬಯಸಿ ಹೀಗೆ ಇಲ್ಲಿ *ಸಿ*  ರವಿ ಆಗಿರುತ್ತದೆ ರವಿ ಇರುವ ಪದ ಕಾಫಿಯ ಆಗುತ್ತದೆ ಅವು ಬೇರೆ ಬೇರೆ ಆಗಿರಬೇಕು *ಷೇರುಗಳು*- ಎಂದರೆ ದ್ವಿಪದಿಯಲ್ಲಿರುವ ಚರಣಗಳು *ಮಖ್ತ*- ಇದು ಕೊನೆಯ ದ್ವಿಪ...