Skip to main content

ಗುರುಕುಲ ಧಾರವಾಡ ಲೇಖನ

ಗುರುಕುಲಾ ಕಲಾಪ್ರತಿಷ್ಠಾನ ಜಿಲ್ಲಾ ಘಟಕ ಧಾರವಾಡ
 ಲೇಖನ ಸ್ಪರ್ಧೆಗಾಗಿ

ವಿಷಯ.. ಸರ್ವಧರ್ಮ ದಮನ್ವಯದ ಪ್ರತೀಕ ವಿವೇಕ

ಸ್ವಾಮಿ ವಿವೇಕಾನಂದರ ಜೀವನ ಯುವಜನರಿಗೆ ದಾರಿ ದೀಪ. ರೋಮಾಂಚಕರವೂ ಚೇತೋಹಾರಿಯೂ ಆಗಿರುವ  ಇವರ ಜೀವನವು ಜಗತ್ತಿನ ಜನರೆಲ್ಲರಿಗೂ   ಚೈತನ್ಯದ ಚಿಲುಮೆ. ವಿಶ್ವನಾಥದತ್ತ ಹಾಗೂ ಭುವನೇಶ್ವರಿ ದೇವಿಗೆ ಶಿವನ ದಯೆಯಿಂದ ಹುಟ್ಟಿದ ಶಿಶುವಾದ ಇವರು ದೈವಾಂಶ ಸಂಭೂತರಾಗಿದ್ದರು. ಶ್ರೀ ರಾಮಕೃಷ್ಣ ಪರಮಹಂಸರ ನೆಚ್ಚಿನ ಶಿಷ್ಯರಾಗಿದ್ದ ನರೇಂದ್ರನಾಥದತ್ತ ನು ಕಾಲಾಂತರದಲ್ಲಿ ವಿವೇಕಾನಂದ ಎಂದು ಪ್ರಸಿದ್ದರಾದರು.ಇವರು ಸರ್ವಧರ್ಮಗಳಲ್ಲೂ ಶಿವನನ್ನೇ ಕಂಡ ಶ್ರೇಷ್ಠರು.
ಅಮೆರಿಕಾದ ಚಿಕಾಗೋದಲ್ಲಿ  ನಡೆಯುವ ಸರ್ವಧರ್ಮ ಸಮ್ಮೇಳನದ ರಾಯಭಾರಿಯಾಗಿ  ವಿವೇಕಾನಂದರು  ಭಾರತವನ್ನು ಪ್ರತಿನಿಧಿಸಿ ಅಲ್ಲಿಯ ಪ್ರಜೆಗಳನ್ನು ಉದ್ದೇಶಿಸಿ ಅಮೆರಿಕಾದ ಸಹೋದರ ಸಹೋದರಿ ಯರೆ ಎಂದು  ಭಾಷಣ ಪ್ರಾರಂಭಿಸಿದ್ದು ಅಮೆರಿಕಾದ ಜನತೆಯಲ್ಲಿ ಸಂಚಲನವನ್ನು ಉಂಟುಮಾಡಿತು. ಯಾರು ಈ ರೀತಿಯ ಸಂಬೋಧನೆಯನ್ನು ಮಾಡದೆ ಇದ್ದುದರಿಂದ ಅಲ್ಲಿ ನೆರೆದ ಜನತೆ ಸ್ತಬ್ಧರಾದರು  ವಿಶ್ವ ಧರ್ಮಗಳ ಐಕ್ಯತೆಯನ್ನು  ಸಾರುವ ರೀತಿಯಲ್ಲಿ ಇತ್ತು ಆ ಸಂಭೋದನೆ. ಕೇವಲ ಹದಿನೈದು ನಿಮುಷದ ಭಾಷಣವಾದರೂ  ವಿದ್ವತ್ಪೂರ್ಣವಾಗಿ  ನುಡಿದ ಅವರ ನುಡಿಗಳು ಅಮೆರಿಕಾದ ಜನತೆಯನ್ನು ಸೆಳೆದುಕೊಂಡಿತು. ಸರ್ವಧರ್ಮ ಸಮನ್ವತೆಯನ್ನೇ ಭಾಷಣದ ಮೂಲ ಉದ್ದೇಶವಾಗಿ ಇಟ್ಟುಕೊಂಡ  ಅವರು ಹಲವಾರು ಶ್ಲೋಕಗಳ ಮೂಲಕ ಸರ್ವಧರ್ಮಿಯರೂ ಸಮ್ಮತಿಸುವ ರೀತಿಯಲ್ಲಿ ಅಳವಡಿಸಿಕೊಂಡು ಅವುಗಳ ಅರ್ಥವಿವರಣೆ ಮಾಡಿ ವೀಕ್ಷಕರ ಮನವನ್ನು ಸೂರೆಗೊಂಡರು. ಎಲ್ಲಾ  ಧರ್ಮಗಳನ್ನು ಒಂದು ಹಿಡಿಯಲ್ಲಿ  ಹಿಡಿದಿಟ್ಟು ಸ್ನೇಹ ಸೌಹಾರ್ದತೆಯ ಭಾವಗಂಗೆಯಲ್ಲಿ  ಅವರನ್ನು ತೇಲಾಡಿಸಿದರು  ಹಿಂದೂ ಧರ್ಮದ ಬಗ್ಗೆ ಅವರು ಮಾಡಿದ ಭಾಷಣದಲ್ಲಿಯೂ , ಹಿಂದೂ ಧರ್ಮದ ಹಿರಿಮೆ  ಸಾರುವುದರೊಂದಿಗೆ ಅದು . ಹೇಗೆ ಇತರ ಧರ್ಮಕ್ಕೆ ಆಶ್ರಯವಿ ತ್ತಿದೆ ಎನ್ನುವುದನ್ನು ಐತಿಹಾಸಿಕ ಸಾಕ್ಷ್ಯಾಧಾರಗಳ ಮೂಲಕ ಸ್ಪಷ್ಟಪಡಿಸಿದರು. ಈ ರೀತಿ ಸರ್ವಧರ್ಮಗಳನ್ನು ಒಗ್ಗೂಡಿಸುವ ಇವರ ಪ್ರಯತ್ನವು ಅಮೆರಿಕದಲ್ಲೆಲ್ಲಾ  ಕೀರ್ತಿಗೆ ಕಾರಣವಾಯಿತು.

ಶ್ರೀಮತಿ.ಪಂಕಜಾ.ಕೆ. ಮುಡಿಪು.ನಿವೃತ್ತ ಅಸ್ಸಿಸ್ಟಂಟ್ ಪೋಸ್ಟ್  ಮಾಸ್ಟರ್   .ಕುರ್ನಾಡು.ದ.ಕ

Comments

Popular posts from this blog

ನವಪರ್ವಕ್ಕೆ ಕಳಿಸಿದ ಪದ್ಯ

[13/01, 10:13 PM] pankajarambhat: ಕಾಗೆ ಬೆಳಗಿನ ಜಾವವೇ  ಬೇಗನೆ ಏಳುತ ಪರಿಸರ ಶುಚಿಯನು ಮಾಡುವುದು ಕಾಳನು ಕಂಡರೆ ಕಾ ಕಾ ಎನುತ ತನ್ನಯ ಬಳಗವ ಕರೆಯುವುದು ಮರದಲ್ಲಿ ಕುಳಿತು ಕತ್ತನು ಕೊಂಕಿಸಿ ಕಸವನು ಸೇರಿಸಿ ಸುಂದರ ಮನೆಯನು ಕಟ್ಟುವುದು ತನ್ನಯ ಮನೆಯಲಿ  ಕೋಗಿಲೆ ಮರಿಗೂ ಕಾವನು ಕೊಡುತ ಬೆಳೆಸುವುದು ಕಪ್ಪನೆ ಇದ್ದರೂ ಚೊಕ್ಕಟ ವಿರುವ ಗುಣವನು ತಾನು ಕಲಿತಿಹುದು ಏನೇ ಕಂಡರೂ ಬಳಗವ ಕರೆಯುತ ಹಂಚಿಯೇ ಅದನು ತಿನ್ನುವುದು  ಕಾಗೆಯ ಕಂಡರೆ  ಅನಿಷ್ಟವೆನುತ ದೂರಕೆ ಓಡಿಸುತ್ತಿರುವರು ಶ್ರಾದ್ಧದ ದಿನದಲಿ ಕಾಗೆಯ ಕರೆಯುತ ಕಾ ಕಾ ಎನುತ ಕಾಯುವರು ಸ್ವಾರ್ಥ ಬುದ್ಧಿಯ ಮನುಜ ಕಲಿವನೆ ನಿನ್ನಯ ಒಳ್ಳೆಯ ಗುಣಗಳನು ಹಕ್ಕಿಗಳಲ್ಲಿ ನೀನೆ ಗುಣದಲಿ ಶ್ರೇಷ್ಠವಾಗಿರುವೆಯಲ್ಲ ಕೊಡದಿಹರೇಕೆ  ಮನ್ನಣೆ ಯನ್ನು ಜಗದ ಜನರು ನಿನಗೆ ಪಂಕಜಾ.ಕೆ [13/01, 10:17 PM] pankajarambhat: ನನ್ನ ಪರಿಚಯ ಗಜಲ್ ನಾನಾಗಿದ್ದೆ ಅಂಚೆ ಇಲಾಖೆಯ  ದಕ್ಷ ಕೆಲಸಗಾತಿ  ಸ್ವಯಂ  ನಿವೃತ್ತಿಯ  ನಂತರ ಸಂಪೂರ್ಣ  ಮನೆಯೊಡತಿ  ನನ್ನ ಮೊದಲ ಕವನ ಸಂಕಲನ ಸಾವಿತ್ರಿ ಬಿಡುಗಡೆಯ ಮಾಡಿ ನಾನಾದೆ ಕವನಗಳೊಡತಿ  ಹೊಲಿಗೆ  ಕಸೂತಿ ಕೈತೋಟ ಮನೆವಾರ್ತೆ ನನ್ನ ಹಾಬಿ ಮನದಲ್ಲಿ ಬರೆವ ತುಡಿತವಿರಲು ನಾ ಇಂದು ಬರಹಗಾತಿ ದಕ್ಷಿಣ ಕನ್ನಡದ  ಮುಡಿಪು ಮೆಚ್ಚಿನ  ನನ್ನೂರು ಕೊಡಕ್ಕಲ್ಲು ವೆಂಕಟ್ರಮಣ ಭಟ್ ಸಾವಿತ್ರಿ ದಂ...

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...

ಗಜಲ್ ಬಗ್ಗೆ

[06/06, 9:41 AM] pankajarambhat: ಗಜಲ್ ಪಾಠ ಗಜಲ್ ಕಲಿಯಲು ಆಸಕ್ತಿ ಇದ್ದವರಿಗಾಗಿ ಒಂದು ಪ್ರಯತ್ನ ಗಜಲ್ ಮುಖ್ಯವಾಗಿ ಇರಬೇಕಾದ ಅಂಶಗಳು *ದ್ವೀಪದಿ* *ಮತ್ಲಾ* *ರದೀಫ್* *ಕಾಫಿಯ* *ಷೇರುಗಳು* *ಮಖ್ತ* ಇಷ್ಟು ವಿಷಯಗಳು ನೆನಪಿರಬೇಕಾದ ಅಂಶಗಳು *ದ್ವೀಪದಿ*- ಗಜಲ್ ಮುಖ್ಯವಾಗಿ ದ್ವೀಪದಿ ಗಳಲ್ಲಿ ಇರಬೇಕು.ಎರಡೆರಡು ಸಾಲುಗಳಲ್ಲಿ *ಮತ್ಲಾ*- ಎಂದರೆ ಗಜಲ್ ನ ಮೊದಲ ಚರಣ. ಇದು ದ್ವೀಪದಿಯಲ್ಲಿದ್ದು ಇದರ ಎರಡು ಚರಣದ ಕೊನೆಯಲ್ಲಿ ಒಂದೇ ರೀತಿಯ ಪ್ರಾಸಗಳು ಬರಬೇಕು ಕಾಫಿಯ ದ ಕೊನೆಯ ಮತ್ತು ರದೀಫ್ ಪ್ರಾಸವಾಗಿದ್ದು ಮುಂದಿನ ಎಲ್ಲಾ ಷೇರುಗಳಲ್ಲಿ ಇದು ಕಡ್ಡಾಯವಾಗಿ ಬರಬೇಕು *ರದೀಫ್*- ಇದು ಒಂದು ಪ್ರಾಸ . ಕಾಫಿಯ ದ ನಂತರ ಎಲ್ಲಾ ಷೇರು ಗಳಲ್ಲಿ  ಮತ್ತೆ ಮತ್ತೆ ಬರುವ ಪದ. ಇವು ಅರ್ಥವುಳ್ಳದಾಗಿದ್ದು ಗಜಲ್ ಗೆ ಮೆರಗು ನೀಡಲು ಸಹಕಾರಿ ರದೀಪ್ ಇಲ್ಲದೆ ಗಜಲ್ ಬರೆಯಬಹುದು ಆದರೆ ಹೆಚ್ಚ ಚಾಲ್ತಿ ಇರೋದು ರದೀಪ್ ಇರುವ ಗಜಲ್ *ಕಾಫಿಯ*- ಇದು ರದೀಪ್ ನ ಹಿಂದೆ ಬರುವ ಪದದ ಕೊನೆಯ ಅಕ್ಷರ. ಇಲ್ಲಿ ಇದಕ್ಕೆ ರವಿ ಎನ್ನುತ್ತಾರೆ ಇದು ಪ್ರಾಸವಾಗಿರುತ್ತದೆ ಆದರೆ ಕೊನೆಯ ಅಕ್ಷರ ಮಾತ್ರ ಒಂದೇ ಆಗಿರಬೇಕು ಕಾಫಿಯಾ ಯಾವಾಗಲು ಒಂದೇ ಆಗಿರಬಾರದು. ಉದಾ: ಬದುಕಿಸಿ, ಸಾಯಿಸಿ,ಬಯಸಿ ಹೀಗೆ ಇಲ್ಲಿ *ಸಿ*  ರವಿ ಆಗಿರುತ್ತದೆ ರವಿ ಇರುವ ಪದ ಕಾಫಿಯ ಆಗುತ್ತದೆ ಅವು ಬೇರೆ ಬೇರೆ ಆಗಿರಬೇಕು *ಷೇರುಗಳು*- ಎಂದರೆ ದ್ವಿಪದಿಯಲ್ಲಿರುವ ಚರಣಗಳು *ಮಖ್ತ*- ಇದು ಕೊನೆಯ ದ್ವಿಪ...