Skip to main content

ಬಾ ತಾಯಿ ಪರಮೇಶ್ವರಿ

ಬಾ ತಾಯಿ   ಪರಮೇಶ್ವರಿ
(ವಾರ್ಧಕ ಷಟ್ಪದಿ)

ಮಾಸವಿದು ನವರಾತ್ರಿ ಹಬ್ಬದಾ ದಿನವಹುದು
ತೋಷವನು  ಕೊಡುತಿಹಳು ದುರ್ಗಾಂಬೆ  ಭಜಕರಿಗೆ
ಹಾಸವನು ಬೀರುತಲಿ ಬರುತಿಹಳು ಬಿಳಿಯ ವಸನವನುಟ್ಟು ಶೈಲಪುತ್ರಿ 
ಮೋಸವಂಚನೆಗಳನು ಮಾಡುತ್ತಲಿರುವವರ
ರೋಷದಲಿ  ತುಂಡರಿಸಿ ಶಿರವನ್ನು ಬಿಸುಡುತ್ತ
ನಾಶವನು ಮಾಡುತಿಹ ದುಷ್ಟರನು ಶಿಕ್ಷಿಸಲು  ಚಂಡಿ ಚಾಮುಂಡಿಯಾಗಿ 

ಹರನನ್ನೊಲಿಸಲಿಕ್ಕೆ  ತಪವನ್ನು ಮಾಡುತಲಿ
ಕರಗಳಲಿ ಜಪಮಾಲೆ ಹಿಡಿಯುತ್ತ   ಕುಳಿತಿಹಳು 
ಹರನನ್ನೆ ಪತಿಯಾಗಿ ಪಡೆಯಲಿಕೆ ಮನದಲ್ಲಿ
ಶಿವನಾಮ ಪಠಿಸುತ್ತಲಿ
ಹರನೊಲಿದು  ಬಂದಾಗ ದುಷ್ಟರನು  ನಿಗ್ರಹಿಸಿ
ಹರಸತಿಯು ನವದಿನವು ತವಕದಲಿ  ಬರುತಿಹಳು
ಧರೆಯೆಡೆಗೆ   ಮನುಜರಾ ಕಷ್ಟಗಳ ಕಳೆಯಲಿಕೆ  ದುರುಳರನು ಬಡಿಯುತ್ತಲಿ 

ನವದಿನವು   ಬಕುತಿಯಲಿ ಪೂಜೆಯನು ಮಾಡುತಿರೆ 
ಭವಿತದಲಿ ಬರುತಿರುವ ಕಷ್ಟಗಳ ಪರಿಹರಿಸಿ
ನವರಂಗು ತುಂಬುವಳು   ಭರದಲ್ಲಿ ಕರಪಿಡಿದು  ಹರಿಸುತಲಿ ಕರುಣೆಯನ್ನು
ತವನಿಧಿಯೆ ಗಿರಿಜಾಂಬೆ  ಬೇಡುವೆನು ಕರಮುಗಿದು 
ನವರಾತ್ರಿ ದಿನದಲ್ಲಿ ಬಾ ತಾಯೆ ಮನೆ ಮನೆಗೆ
ನವವಿಧದ ಪುಷ್ಪಗಳನರ್ಪಿಸುತ ಬೇಡುವೆನು ಹರಸೆನ್ನ ಹೇ ಜನನಿಯೇ 

ಕರುನಾಡ ಸಂಸ್ಕೃತಿಯ ಸಾರುತಿಹ ಹಬ್ಬವಿದು
ಹರನರಸಿ ಪಾರ್ವತಿಯ ವಿಧವಿಧದ ರೂಪಗಳು
ಮೆರವಣಿಗೆ ಮಾಡುತಲಿ   ಹಲವಿಧದಲರ್ಚಿಸುತ ಪಾಡುವರು ಮಹಿಮೆಯನ್ನು
ತರತರದ ವೇಷಗಳು  ಬ್ಯಾಂಡುವಾದ್ಯದ ಸಹಿತ  
ಬರುತಿಹವು  ನಿನ್ನನ್ನು  ಕರೆತರಲು ಧರೆಯೆಡೆಗೆ
ಹರಸುತಲಿ ಬಾತಾಯಿ  ಬೇಗದಲಿ  ಬಕುತರಾ  ಬೇಡಿಕೆಯನೀಡೇರಿಸಿ
ಪಂಕಜಾ.ಕೆ.ರಾಮಭಟ್

Comments

Popular posts from this blog

ನವಪರ್ವಕ್ಕೆ ಕಳಿಸಿದ ಪದ್ಯ

[13/01, 10:13 PM] pankajarambhat: ಕಾಗೆ ಬೆಳಗಿನ ಜಾವವೇ  ಬೇಗನೆ ಏಳುತ ಪರಿಸರ ಶುಚಿಯನು ಮಾಡುವುದು ಕಾಳನು ಕಂಡರೆ ಕಾ ಕಾ ಎನುತ ತನ್ನಯ ಬಳಗವ ಕರೆಯುವುದು ಮರದಲ್ಲಿ ಕುಳಿತು ಕತ್ತನು ಕೊಂಕಿಸಿ ಕಸವನು ಸೇರಿಸಿ ಸುಂದರ ಮನೆಯನು ಕಟ್ಟುವುದು ತನ್ನಯ ಮನೆಯಲಿ  ಕೋಗಿಲೆ ಮರಿಗೂ ಕಾವನು ಕೊಡುತ ಬೆಳೆಸುವುದು ಕಪ್ಪನೆ ಇದ್ದರೂ ಚೊಕ್ಕಟ ವಿರುವ ಗುಣವನು ತಾನು ಕಲಿತಿಹುದು ಏನೇ ಕಂಡರೂ ಬಳಗವ ಕರೆಯುತ ಹಂಚಿಯೇ ಅದನು ತಿನ್ನುವುದು  ಕಾಗೆಯ ಕಂಡರೆ  ಅನಿಷ್ಟವೆನುತ ದೂರಕೆ ಓಡಿಸುತ್ತಿರುವರು ಶ್ರಾದ್ಧದ ದಿನದಲಿ ಕಾಗೆಯ ಕರೆಯುತ ಕಾ ಕಾ ಎನುತ ಕಾಯುವರು ಸ್ವಾರ್ಥ ಬುದ್ಧಿಯ ಮನುಜ ಕಲಿವನೆ ನಿನ್ನಯ ಒಳ್ಳೆಯ ಗುಣಗಳನು ಹಕ್ಕಿಗಳಲ್ಲಿ ನೀನೆ ಗುಣದಲಿ ಶ್ರೇಷ್ಠವಾಗಿರುವೆಯಲ್ಲ ಕೊಡದಿಹರೇಕೆ  ಮನ್ನಣೆ ಯನ್ನು ಜಗದ ಜನರು ನಿನಗೆ ಪಂಕಜಾ.ಕೆ [13/01, 10:17 PM] pankajarambhat: ನನ್ನ ಪರಿಚಯ ಗಜಲ್ ನಾನಾಗಿದ್ದೆ ಅಂಚೆ ಇಲಾಖೆಯ  ದಕ್ಷ ಕೆಲಸಗಾತಿ  ಸ್ವಯಂ  ನಿವೃತ್ತಿಯ  ನಂತರ ಸಂಪೂರ್ಣ  ಮನೆಯೊಡತಿ  ನನ್ನ ಮೊದಲ ಕವನ ಸಂಕಲನ ಸಾವಿತ್ರಿ ಬಿಡುಗಡೆಯ ಮಾಡಿ ನಾನಾದೆ ಕವನಗಳೊಡತಿ  ಹೊಲಿಗೆ  ಕಸೂತಿ ಕೈತೋಟ ಮನೆವಾರ್ತೆ ನನ್ನ ಹಾಬಿ ಮನದಲ್ಲಿ ಬರೆವ ತುಡಿತವಿರಲು ನಾ ಇಂದು ಬರಹಗಾತಿ ದಕ್ಷಿಣ ಕನ್ನಡದ  ಮುಡಿಪು ಮೆಚ್ಚಿನ  ನನ್ನೂರು ಕೊಡಕ್ಕಲ್ಲು ವೆಂಕಟ್ರಮಣ ಭಟ್ ಸಾವಿತ್ರಿ ದಂ...

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...

ಗಜಲ್ ಬಗ್ಗೆ

[06/06, 9:41 AM] pankajarambhat: ಗಜಲ್ ಪಾಠ ಗಜಲ್ ಕಲಿಯಲು ಆಸಕ್ತಿ ಇದ್ದವರಿಗಾಗಿ ಒಂದು ಪ್ರಯತ್ನ ಗಜಲ್ ಮುಖ್ಯವಾಗಿ ಇರಬೇಕಾದ ಅಂಶಗಳು *ದ್ವೀಪದಿ* *ಮತ್ಲಾ* *ರದೀಫ್* *ಕಾಫಿಯ* *ಷೇರುಗಳು* *ಮಖ್ತ* ಇಷ್ಟು ವಿಷಯಗಳು ನೆನಪಿರಬೇಕಾದ ಅಂಶಗಳು *ದ್ವೀಪದಿ*- ಗಜಲ್ ಮುಖ್ಯವಾಗಿ ದ್ವೀಪದಿ ಗಳಲ್ಲಿ ಇರಬೇಕು.ಎರಡೆರಡು ಸಾಲುಗಳಲ್ಲಿ *ಮತ್ಲಾ*- ಎಂದರೆ ಗಜಲ್ ನ ಮೊದಲ ಚರಣ. ಇದು ದ್ವೀಪದಿಯಲ್ಲಿದ್ದು ಇದರ ಎರಡು ಚರಣದ ಕೊನೆಯಲ್ಲಿ ಒಂದೇ ರೀತಿಯ ಪ್ರಾಸಗಳು ಬರಬೇಕು ಕಾಫಿಯ ದ ಕೊನೆಯ ಮತ್ತು ರದೀಫ್ ಪ್ರಾಸವಾಗಿದ್ದು ಮುಂದಿನ ಎಲ್ಲಾ ಷೇರುಗಳಲ್ಲಿ ಇದು ಕಡ್ಡಾಯವಾಗಿ ಬರಬೇಕು *ರದೀಫ್*- ಇದು ಒಂದು ಪ್ರಾಸ . ಕಾಫಿಯ ದ ನಂತರ ಎಲ್ಲಾ ಷೇರು ಗಳಲ್ಲಿ  ಮತ್ತೆ ಮತ್ತೆ ಬರುವ ಪದ. ಇವು ಅರ್ಥವುಳ್ಳದಾಗಿದ್ದು ಗಜಲ್ ಗೆ ಮೆರಗು ನೀಡಲು ಸಹಕಾರಿ ರದೀಪ್ ಇಲ್ಲದೆ ಗಜಲ್ ಬರೆಯಬಹುದು ಆದರೆ ಹೆಚ್ಚ ಚಾಲ್ತಿ ಇರೋದು ರದೀಪ್ ಇರುವ ಗಜಲ್ *ಕಾಫಿಯ*- ಇದು ರದೀಪ್ ನ ಹಿಂದೆ ಬರುವ ಪದದ ಕೊನೆಯ ಅಕ್ಷರ. ಇಲ್ಲಿ ಇದಕ್ಕೆ ರವಿ ಎನ್ನುತ್ತಾರೆ ಇದು ಪ್ರಾಸವಾಗಿರುತ್ತದೆ ಆದರೆ ಕೊನೆಯ ಅಕ್ಷರ ಮಾತ್ರ ಒಂದೇ ಆಗಿರಬೇಕು ಕಾಫಿಯಾ ಯಾವಾಗಲು ಒಂದೇ ಆಗಿರಬಾರದು. ಉದಾ: ಬದುಕಿಸಿ, ಸಾಯಿಸಿ,ಬಯಸಿ ಹೀಗೆ ಇಲ್ಲಿ *ಸಿ*  ರವಿ ಆಗಿರುತ್ತದೆ ರವಿ ಇರುವ ಪದ ಕಾಫಿಯ ಆಗುತ್ತದೆ ಅವು ಬೇರೆ ಬೇರೆ ಆಗಿರಬೇಕು *ಷೇರುಗಳು*- ಎಂದರೆ ದ್ವಿಪದಿಯಲ್ಲಿರುವ ಚರಣಗಳು *ಮಖ್ತ*- ಇದು ಕೊನೆಯ ದ್ವಿಪ...